Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿ.ಪಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಹೊರವಲಯದಲ್ಲಿರುವ ಮನೆಯಲ್ಲಿ 5 ಕ್ಕೂ ಹೆಚ್ಚು ಜನ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಕೂಡ ಮಹಾದೇವ ಬನ್ನೂರ ಮೇಲೆ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದರು. ಆ ದಾಳಿಯಲ್ಲಿ ಅಕ್ರಮವಾಗಿ 27 ಲಕ್ಷ ನಗದು ಪತ್ತೆಯಾಗಿತ್ತು, ಅದರ ಮುಂದುವರೆದ ಭಾಗವಾಗಿ ಈಗ ಮತ್ತೊಮ್ಮೆ ದಾಳಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ