Kannada NewsKarnataka NewsNational

*ಚಿತ್ರದುರ್ಗದ ಮಹಾರಾಜರು ಕಾಲ್ತುಳಿತದಲ್ಲಿ ಸಾವನ್ನಪ್ಪಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಇತ್ತೀಚೆಗೆ ಭೀಕರ ಕಾಲ್ತುಳಿತ ಸಂಭವಿಸಿ 30 ಜನರ ಸಾವಾಗಿತ್ತು. ಆದರೆ ಇದೇ ವೇಳೆ ಚಿತ್ರದುರ್ಗದ ನಾಗಸಾಧು ಒಬ್ಬರು ಕೂಡಾ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ನಾಗಸಾಧು ನಾಗನಾಥ ಮಹಾರಾಜ ಅವರು ಕಾಲ್ತುಳಿತದಲ್ಲಿ ಸಾವನ್ನಪ್ಪಿಲ್ಲ ಅವರ ಶವ ಕುಂಭಮೇಳದ ಪ್ರದೇಶದಿಂದ ಸುಮಾರು 500 ಕಿ.ಮೀ ದೂರದಲ್ಲಿ ಪತ್ತೆಯಾಗಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

ನಾಗಸಾಧು ನಾಗನಾಥ ಮಹಾರಾಜರ ಶವ ಕುಂಭಮೇಳ ನಡೆಯುತ್ತಿರುವ ಸ್ಥಳದಿಂದ 500 ಕಿ.ಮೀ ದೂರದಲ್ಲಿರುವ ಝಾನ್ಸಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದೆ. ಝಾನ್ಸಿ ರೈಲು ನಿಲ್ದಾಣದ ಸೂಚನಾ ಫಲಕದಲ್ಲಿ ನಾಗಸಾಧು ಅವರ ಫೋಟೋವನ್ನು ಹಾಕಲಾಗಿತ್ತು. ಅವರು ಚಿತ್ರದುರ್ಗದ ಬಂಜಾರ ಗುರುಪೀಠದ ವಿಳಾಸವನ್ನು ನೀಡಿದ್ದರಿಂದ ಅವರು ಚಿತ್ರದುರ್ಗದವರು ಎಂದು ನಮಗೆ ತಿಳಿದುಬಂದಿದೆ. ಸಾರ್ವಜನಿಕ ಪ್ರಕಟಣೆಯಲ್ಲಿ ಅವರನ್ನು ತಿಳಿದಿರುವವರು ರೈಲ್ವೆ ನಿಲ್ದಾಣದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಮಹಾರಾಜರ ಪಾರ್ಥಿವ ಶರೀರವನ್ನು ಝಾನ್ಸಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತದೇಹವನ್ನು ಝಾನ್ಸಿಯಿಂದ ಚಿತ್ರದುರ್ಗಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಆದರೆ ಅವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಅವರ ನಿಧನಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆ ಮಾಡುವ ನಿರೀಕ್ಷೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button