
ಪ್ರಗತಿವಾಹಿನಿ ಸುದ್ದಿ : ಜೋಡಿ ಕೊಲೆಗೈದು ಶಿಕ್ಷೆಗೆ ಒಳಗಾಗಿದ್ದ ಕೈದಿಯೋರ್ವ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತನು ಮೂಲತಃ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದ ಬಸವರಾಜ ಹೊಸೂರ (47) ಎಂದು ತಿಳಿದುಬಂದಿದೆ.
ಡಬಲ್ ಮರ್ಡರ್ ಮಾಡಿದ್ದ ಬಸವರಾಜ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಜೈಲಿನ ಕಿಟಕಿಗೆ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೈದಿಯು ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುವುದರ ಬಗ್ಗೆ ಸದ್ಯ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಜೈಲಿನ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ