Kannada NewsKarnataka News

ಜೋಡಿ ಕೊಲೆ ಮಾಡಿದ ವ್ಯಕ್ತಿ ಜೈಲಿನಲ್ಲೆ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ : ಜೋಡಿ ಕೊಲೆಗೈದು ಶಿಕ್ಷೆಗೆ ಒಳಗಾಗಿದ್ದ ಕೈದಿಯೋರ್ವ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಮೃತನು ಮೂಲತಃ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದ ಬಸವರಾಜ ಹೊಸೂರ (47) ಎಂದು ತಿಳಿದುಬಂದಿದೆ.

Home add -Advt

ಡಬಲ್ ಮರ್ಡ‌ರ್ ಮಾಡಿದ್ದ ಬಸವರಾಜ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಜೈಲಿನ ಕಿಟಕಿಗೆ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೈದಿಯು ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುವುದರ ಬಗ್ಗೆ ಸದ್ಯ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಜೈಲಿನ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Related Articles

Back to top button