Belagavi NewsBelgaum NewsKannada NewsKarnataka NewsNational

*ಈ ಮೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ನೈಋತ್ಯ ಮುಂಗಾರು ಮಾರುತಗಳು ರಾಜ್ಯಾದ್ಯಂತ ತೀವ್ರಗೊಂಡಿದ್ದು, ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಲಿದೆ. ಆ ಜಿಲ್ಲೆಗಳ ಜನರು ಎಚ್ಚರ ಇರುವಂತೆ ಹಾಗೂ ಅಧಿಕಾರಿಗಳು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. 

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲೂ ಗಾಳಿಯ ವೇಗ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ರಸ್ತೆಗಳಲ್ಲಿ ಸಾಗುವ ವಾಹನ ಸವಾರರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತಗಳು ಪ್ರಕಟಣೆ ಹೊರಡಿಸಿವೆ.

ಬಯಲು ಸೀಮೆಯ ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಹಗುರವಾದ ಮಳೆಯ ಸಿಂಚನವಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಲಿದೆ.

Home add -Advt

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಾತಾವರಣ ಸದ್ಯ ತಂಪಾಗಿದ್ದು, ಮೋಡಕವಿದ ವಾತಾವರಣ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ವೇಳೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button