Belagavi NewsBelgaum NewsKannada NewsKarnataka News

*ರಾಜ್ಯದ 13 ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ ಕರಾವಳಿ ಹಾಗೂ ವಿವಿಧ ಒಳನಾಡಿನ ಸುಮಾರು 13 ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ತುಂತುರು ಅಥವಾ ಹಗುರ ಮಳೆಯಾಗಬಹುದು.

ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರ ಮಳೆ ಬಬೀಳುವ ನಿರೀಕ್ಷೆಯಿದೆ.

ಉಳಿದ ಜಿಲ್ಲೆಗಳಲ್ಲಿ ಮಳೆಯ ಅಭಾವವಿದ್ದು ಮೋಡಕವಿದ ವಾತಾವರಣದೊಂದಿಗೆ ಒಣ ಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮುಂಗಾರು ಮಳೆ ತೀರಾ ದುರ್ಬಲಗೊಂಡಿದ್ದರೂ ಕಳೆದ 24 ಗಂಟೆಗಳಲ್ಲಿ ಕೆಲವೆಡೆ ಸಣ್ಣ ಪ್ರಮಾಣದ ಮಳೆಯಾಗಿದೆ. 

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸುಮಾರಿನಲ್ಲಿ ದಾಖಲಾಗುವ ಸಾಧ್ಯತೆಯಿದೆ. ಮಳೆಯಿಲ್ಲದೆ ಉಷ್ಣಾಂಶದಲ್ಲಿ ಸಲ್ಪ ಮಟ್ಟಿನ ಏರಿಕೆ ಕಂಡುಬರಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button