ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯ ವದಂತಿಗಳ ಬೆನ್ನಲ್ಲೇ ಸಂಪುಟದ ಸಚಿವರು ತಮ್ಮ ಸಾಧನೆಗಳ ರಿಪೋರ್ಟ್ ಕಾರ್ಡ್ ನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಿದ್ದಾರೆ.
ದೆಹಲಿಯ ಪ್ರಗತಿ ಮೈದಾನದಲ್ಲಿ 79 ಸಚಿವರೂ ಒಳಗೊಂಡಂತೆ ಮೋದಿ ಸಭೆ ನಡೆಸಿದರು. ಈ ವೇಳೆ ಸಂಪುಟದ ಸಚಿವರು ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವರದಿ ಸಲ್ಲಿಸಿದರು.
ಸಚಿವರು ಬಿಜೆಪಿ ಸರಕಾರದ 9 ವರ್ಷಗಳ ಆಡಳಿತದಲ್ಲಿ ಮಾಡಿರುವ ಸಾಧನೆಗಳನ್ನು ಇನ್ನು 9 ತಿಂಗಳುಗಳಲ್ಲಿ ಜನತೆಗೆ ತಿಳಿಸುವ ಕಾರ್ಯವಾಗಬೇಕು ಎಂದು ಸಂಪುಟದ ಸಚಿವರಿಗೆ ಸೂಚಿಸಿದ್ದಾರೆ.
ಈ ಸಂಬಂಧ ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿದೆ” ಎಂದು ಹೇಳಿಕೊಂಡಿದ್ದಾರೆ. ಜತೆಗೆ 2047ರ ಅವಧಿಯಲ್ಲಿ ದೇಶ ಸಾಧಿಸಬಹುದಾದ ಬೆಳವಣಿಗೆಗಳ ಅವಲೋಕನ ಕೂಡ ಇದೇ ಸಭೆಯಲ್ಲಿ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ