
ಪ್ರಗತವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ತಾವರಗೇರಾ ಬಳಿ ಕಾರನ್ನ ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಖಾರದ ಪುಡಿ ಎರಚಿ 5 ಲಕ್ಷ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ಶಿವಾನಂದ ಐದನಾಳ, ವಿಜಯಮಹಾಂತೇಶ ಪಲ್ಲೇದ, ಹಾಗೂ ಚಾಲಕ ಖಾಲೀದ್ ಚಾವೋಸ್ ಎಂಬುವವರು 5 ಲಕ್ಷ ಹಣದೊಂದಿಗೆ ಇನೋವಾ ಕಾರಿನಲ್ಲಿ ಲಿಂಗಸಗೂರಿನಿಂದ ಕೊಪ್ಪಳಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್ ಮೂಲಕ ಕಾರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕುಷ್ಟಗಿ ತಾಲೂಕಿನ ತಾವರಗೇರಾ ಬಳಿ ಕಾರು ಅಡ್ಡ ಕಟ್ಟಿ, ಬ್ಲೇಡ್ ನಿಂದ ಕುತ್ತಿಗೆ ಕೈಗೆ ಗಾಯಗೊಳಿಸಿ ಹಣ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾರೆ.
ಕೂಡಲೇ ಸ್ಥಳೀಯರು ಗಾಯಾಳುಗಳನ್ನು ತಾವರಗೇರಾ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದೂರಿನನ್ವಯ ಪ್ರಕರಣದ ಜಾಡು ಹಿಡಿದಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ