Kannada NewsKarnataka NewsNational
*ಚಾಕು ಇರಿದು, ಕೈ ಕಟ್ಟಿ ಹಾಕಿ ಉದ್ಯಮಿ ಮನೆಯಲ್ಲಿ ದರೋಡೆ ನಡೆಸಿದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ಖ್ಯಾತ ಉದ್ಯಮಿ ಪದ್ಮನಾಭ ಕೊಟ್ಯಾನ್ ಅವರಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿರುವ ಘಟನೆ ನಡೆದಿದೆ.
ಇನ್ನೋವಾ ಕಾರಿನಲ್ಲಿ ಬಂದ 8 ಜನ ದುಷ್ಕರ್ಮಿಗಳು ಮನೆಗೆ ನುಗ್ಗಿ ಮನೆಯಲ್ಲಿ ಇದ್ದವರಿಗೆ ಚೂರಿ ತೋರಿಸಿ ಬೆದರಿಸಿದ್ದಾರೆ. ಈ ವೇಳೆ ಉದ್ಯಮಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದಿದ್ದಾರೆ. ಅಷ್ಟೆಯಲ್ಲದೆ ಪದ್ಮನಾಭ ಅವರ ಪತ್ನಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ನಗದು ಸೇರಿದಂತೆ ಚಿನ್ನಾಭರಣ, ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳೂ ಕೂಡ ತೆರಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪದ್ಮನಾಭ ಕೊಟ್ಯಾನ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ