Latest

ಸೋಲಿನ ನೈತಿಕ ಹೊಣೆ: ಸಿದ್ದರಾಮಯ್ಯ, ದಿನೇಶ್ ಗುಡೂರಾವ್ ರಾಜಿನಾಮೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ರಾಜಿನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಕಳುಹಿಸಿದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಹೊತ್ತಿನಲ್ಲೇ  ದಿನೇಶ ಗುಂಡುರಾವ್ ಕೂಡ ಪತ್ರಿಕಾಗೋಷ್ಠಿ ನಡೆಸಿ ರಾಜಿನಾಮೆ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಅನರ್ಹ ಶಾಸಕರಿಗೆ ಜನರು ಸರಿಯಾದ ತೀರ್ಪು ನೀಡಲಿದ್ದಾರೆ. ಬಿಜೆಪಿ ಸರಕಾರ ಪತನವಾಗಲಿದೆ. ಡಿ.9ರ ನಂತರ ನಮ್ಮ ಸರಕಾರ ಬರಲಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ ತೀರ್ಪು ಅವರ ನಿರೀಕ್ಷೆಗೆ ವಿರುದ್ಧವಾಗಿ ಬಂದಿದ್ದರಿಂದ ಅವರು ರಾಜಿನಾಮೆ ನೀಡಿದ್ದಾರೆ.

Home add -Advt

Related Articles

Back to top button