*ಗೃಹಲಕ್ಷ್ಮಿ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ*
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟ ಅತ್ತೆ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಟ್ಟಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ನೀರಲಗಿ ಗ್ರಾಮದಲ್ಲಿ ಸೊಸೆ ಹೊರಗೆ ಕೆಲಸಕ್ಕೆ ಹೋಗಿ ಕಷ್ಟ ಪಡುವುದನ್ನು ನೋಡಿದ ಅತ್ತೆ ತಾವು ಕೂಡಿಟ್ಟ ಗೃಹಲಕ್ಷ್ಮಿ ಯೋಜನೆಯ ಹಣದಲ್ಲೇ ಮನೆಯಲ್ಲಿ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟಿದ್ದಾರೆ. ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟಿದ್ದರು. 10 ಕಂತಿನ 20,000 ರೂಪಾಯಿ ಹಣ ಕೂಡಿಟ್ಟು ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟಿದ್ದಾರೆ.
ಅತ್ತೆ ಕಾರ್ಯಕ್ಕೆ ನೀರಲಗಿ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಶ್ರಾವಣ ಮಂಗಳವಾರದ ಶುಭದಿನದಂದೇ ಫ್ಯಾನ್ಸಿ ಸ್ಟೋರ್‌ಗೆ ಪೂಜೆ ಮಾಡಿ ಚಾಲನೆ ನೀಡಲಾಗಿದೆ. ಅತ್ತೆ-ಸೊಸೆ ಸಂಭ್ರಮದಿಂದ ಫ್ಯಾನ್ಸಿ ಸ್ಟೋರ್ ಶುರು ಮಾಡಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಅತ್ತೆ – ಸೊಸೆ ಮಧ್ಯೆ ಜಗಳ ತಂದಿಡುವ ಯೋಜನೆ ಎನ್ನುವ ವಿರೋಧ ಪಕ್ಷಗಳು ಇದಕ್ಕೇನನ್ನುತ್ತಾರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ