ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದಾರೆ.
ಸತೀಶ್ ಜಾರಕಿಹೊಳಿಗೆ ಲೋಕೋಪಯೋಗಿ ಖಾತೆ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಇನ್ನೂ ಹಂಚಿಕೆ ಮಾಡಲಾಗಿಲ್ಲ.
ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಇಬ್ಬರೂ ಸೇರಿ ಜಿಲ್ಲೆಯ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಪರಸ್ಪರ ಚರ್ಚೆಯೊಂದಿಗೆ ಜಿಲ್ಲೆಗೆ ಹೆಚ್ಚಿನ ಅನುದಾನ ತರಲು ಮುಂದಾಗಿದ್ದಾರೆ.
ಮಂಗಳವಾರ ಇಬ್ಬರೂ ಸಚಿವರು ಸೇರಿ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ. ಸತೀಶ್ ಜಾರಕಿಹೊಳಿ ಪತ್ರಕರ್ತರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ಸಧ್ಯದ ಸ್ಥಿತಿ ಗತಿಗಳ ಕುರಿತು ಮಾಹಿತಿ ಪಡೆಯುವ ಸಚಿವರು, ಸಮಗ್ರ ಅಭಿವೃದ್ಧಿಯ ನೀಲನಕ್ಷೆ ತಯಾರಿಸುವ ಉದ್ಧೇಶ ಹೊಂದಿದ್ದಾರೆ.
ಜಿಲ್ಲೆಯ ಎಲ್ಲ ಶಾಸಕರೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸತೀಶ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ