ಜುಲೈ 1ರಿಂದ ರಾಜ್ಯದಲ್ಲಿ ಶಾಲೆಗಳ ಆರಂಭ: ಹೊಸ ಕಾರ್ಯಸೂಚಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ.

ಈ ಕುರಿತು ಹೊಸ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಜೂನ್ 15ರಿಂದ ಶಾಲೆಗಳನ್ನು ಆರಂಭಿಸಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಲಾಕ್ ಡೌನ್ ಮುಂದುವರಿದಿರುವುದರಿಂದ ಮತ್ತು ಕೊರೋನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.

ಜುಲೈ 1ರಿಂದ ಅಕ್ಟೋಬರ್ 10ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 21ರಿಂದ 2022ರ ಏಪ್ರಿಲ್ 30 2ನೇ ಅವಧಿ ಎಂದು ನಿಗದಿಪಡಿಸಲಾಗಿದೆ. ಅಕ್ಟೋಬರ್ 11ರಿಂದ 20ರ ವರೆಗೆ ದಸರಾ ರಜೆ ನಿಗದಿಯಾಗಿದೆ. 2022ರ ಮೇ 1ರಿಂದ ಮೇ 28ರ ವರೆಗೆ ಬೇಸಿಗೆ ರಜೆ ನಿಗದಿಪಡಿಸಲಾಗಿದೆ.

ಹೊಸ ಮಾರ್ಗಸೂಚಿಗೆ ಇಲ್ಲಿ ಕ್ಲಿಕ್ ಮಾಡಿ – SCHADM04062021

ಪಿಯುಸಿ ಪರೀಕ್ಷೆ ರದ್ದು – ಸುರೇಶ ಕುಮಾರ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button