*ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣ; ಆರೋಪಿ ಪತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣಬರಹಟ್ಟಿ ಗ್ರಾಮದಲ್ಲಿ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಆರೋಪಿ ಪತಿಯನ್ನು 24 ಗಂಟೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ ತಿಳಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ಹಣಬರಟ್ಟಿ ನಿವಾಸಿ ಆರೋಪಿ ಯಲ್ಲಪ್ಪ ಹನಮಂತ (40) ತನ್ನ ಪತ್ನಿ ಫಕೀರವ್ವಳ (36) ಶೀಲ ಶಂಕಿಸಿ ಮುಖಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ. ಈತನನ್ನು ಪೊಲೀಸರು ಬಂಧಿಸಿದ್ದಾರೆ.
ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 22 ರಂದು ರಾತ್ರಿ 11:15ರ ಸುಮಾರಿಗೆ ಆರೋಪಿ ಯಲ್ಲಪ್ಪ ಹನಮಂತ, ತನ್ನ ಹೆಂಡತಿ ಫಕೀರವ್ವಾ ಮಲಗಿದ್ದಾಗ ಮುಖದ ಮೇಲೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ.
ಮೇ 23 ರಂದು ನೇಸರಗಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 37/2024 ಕಲಂ 504, 302, ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಮೇ 24 ರಂದು ಯಲ್ಲಪ್ಪ ಹನಮಂತ ನನ್ನು ಬಂಧಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ