Karnataka News

*ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬ್ರಿಟನ್ ಮಾಜಿ ಪ್ರಧಾನಿ*

ಪ್ರಗತಿವಾಹಿನಿ ಸುದ್ದಿ: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ.

ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ಗುರುರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.

Home add -Advt

ಈ ವೇಳೆ ಅಕ್ಷತಾ ಮೂರ್ತಿ ತಂದೆ-ತಾಯಿ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ, ಪತ್ನಿ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಉಪಸ್ಥಿತರಿದ್ದರು.

Related Articles

Back to top button