
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೊಲೆ, ಸುಲಿಗೆ ಲವ್ ಜಿಹಾದ್ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳು ಜಾಸ್ತಿ ಆಗುತ್ತಲೇ ಇವೆ. ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಪೊಲೀಸ್ ವ್ಯವಸ್ಥೆಯೂ ಸರಿ ಇಲ್ಲ. ಸರ್ಕಾರ ಬಿಗಿ ಕ್ರಮಕೈಗೊಳ್ಳುತ್ತಿಲ್ಲ. ಇದರಿಂದ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ವಿಜಯೇಂದ್ರ ಹೇಳಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮಹಿಳೆಯರಿಗೆ ರಾಜ್ಯದಲ್ಲಿ ಸುರಕ್ಷತೆ ಇಲ್ಲ. ಕಾನೂನು ವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಮಾಡಲಾಗಿದೆ. ಈಗಾಗಲೇ ತಡವಾಗಿದ್ದು, ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತನ್ನ ಜವಾಬ್ದಾರಿಯನ್ನು ಮೆರೆಯಲಿ ಎಂದು ಟೀಕಿಸಿದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ