ಪ್ರಗತಿವಾಹಿನಿ ಸುದ್ದಿ: ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸಪ್ಪ ಹೆಂಡತಿಯ ಶೀಲ ಶಂಕಿಸಿ ಶೆಡ್‌ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ, ಮನಸೋ ಇಚ್ಛೆ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಗೊಳಗಾದ ಮಹಿಳೆ ಕಣ್ಣೀರು ಹಾಕಿದ್ದಾರೆ.
ಈ ಮಹಿಳೆ ಹೆಸರು ಪ್ರತಿಭಾ. ಇವರು ಹೀಗೆ ಪರಿಪರಿಯಾಗಿ ಕಣ್ಣೀರಿಡಲು ಕಾರಣ ತನ್ನ ಇಬ್ನರು ನಾದನಿಯರು ಹಾಗೂ ತನ್ನ ಗಂಡ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸಪ್ಪ ಯಲ್ಲಪ್ಪ ಹೆಂಡತಿಯ ಶೀಲ ಶಂಕಿಸಿ ಕಳೆದ ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು ಹಲ್ಲೆ ಮಾಡಿ ಬರೆ ಹಾಕಿದ್ದಾನೆ.
ರಾಯಬಾಗ ತಾಲೂಕಿನ ನಿಡಗುಂಡಿ ಗ್ರಾಮದ ಪ್ರತಿಭಾಗೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದ ಯಲ್ಲಪ್ಪ ಅಗಸೆಗೆ ಕಳೆದ 10 ವರ್ಷಗಳ ಹಿಂದೆಯೇ ಮದುವೆ ಮಾಡಿಕೊಡಲಾಗಿದೆ. ಈ ದಂಪತಿಗೆ ಮೂರು ಮುದ್ದಾದ ಮಕ್ಕಳು ಇದ್ದಾರೆ. ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾನೆ. ನನ್ನ ಪತಿ ಮಾತ್ರ ನನ್ನ ಮೇಲೆ ಹಲ್ಲೆ ಮಾಡಿಲ್ಲ. ಬದಲಾಗಿ ಅವನ ಅಕ್ಕ, ತಂಗಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸುದ್ದಿಗಾರರ ಮುಂದೆ ಪ್ರತಿಭಾ ಆರೋಪಿಸಿದ್ದಾರೆ.
ಪ್ರತಿಭಾ ಮೇಲೆ ಮನಸೊ ಇಚ್ಚೆ ಹಲ್ಲೆ ಮಾಡಿ, ನಿಮ್ಮ ಮಗಳು ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ಎಂದು ದೂರು ಕೊಟ್ಟು ನಿಮ್ಮ ಮೇಲೆಯೇ ಕೇಸ್ ದಾಖಲಿಸುತ್ತೇನೆ ಎಂದು ಪ್ರತಿಭಾ ಕುಟುಂಬಕ್ಕೆ ಯಲ್ಲಪ್ಪ ಬೇದರಿಕೆ ಹಾಕಿದ್ದಾನೆ. ಆದರೆ ಪ್ರತಿಭಾ ಶೆಡ್‌ನಲ್ಲಿ ಯಾರೂ ಇಲ್ಲದ ವೇಳೆ ಹೇಗೋ ಮಾಡಿ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಳೆ ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರನ್ನು ಭೇಟಿಯಾಗಿ ಪ್ರತಿಭಾ ಕುಟುಂಭಸ್ಥರು ದೂರು ಕೊಡಲು ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ