
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಾಲ್ವರು ಸಚಿವರು ಗುರುವಾರ ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದು, ಭಾರೀ ಕುತೂಹಲ ಮೂಡಿಸಿದೆ.
ಸಚಿವರುಗಳಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಆದರೆ ಪತ್ರಿಕಾಗೋಷ್ಠಿಯ ವಿಷಯ ಗುಪ್ತವಾಗಿಡಲಾಗಿದೆ. ಸರಕಾರದ ಮೇಲೆ ಬಂದಿರುವ ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣದ ಆರೋಪಗಳನ್ನು ತಳ್ಳಿ ಹಾಕಿ, ಸರಕಾರದ ನಡೆಯನ್ನು ಸಮರ್ಥಿಸಿಕೊಳ್ಳಲು ಈ ಪತ್ರಿಕಾಗೋಷ್ಠಿ ನಡೆಸುತ್ತಿರುವ ಸಾಧ್ಯತೆ ಇದೆ. ವಿಧಾನ ಮಂಡಳ ಅಧಿವೇಶನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಕಾಲದ ಹಗರಣಗಳನ್ನು ಬಿಚ್ಚಿಡುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ