Kannada NewsKarnataka NewsLatestNational

*ಸಿಲಿಂಡರ್ ಬೆಲೆ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಇಂದು ವಾಣಿಜ್ಯ ಸಿಲಿಂಡರ್​ ಬೆಲೆ ಯಲ್ಲಿ ಭಾರಿ ಏರಿಕೆಯಾಗಿದ್ದು ಜನರಿಗೆ ಭಾರಿ ಶಾಕ್ ಎದುರಾಗಿದೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ. ಈ ಮೂಲಕ ಹೋಟೆಲ್ ಮಾಲೀಕರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ

ಭಾರಿ ಏರಿಕೆಯ ನಂತರ ದೆಹಲಿಯಲ್ಲಿ (Delhi) 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು.  ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಸಾರ್ವಜನಿಕರಿಗೆ ನೇರವಾಗಿ ಅನ್ವಯವಾಗುವ ಪ್ರಮುಖ ಇಂಧನ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಗೃಹ ಬಳಕೆಯ 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆಗಳು ಯಥಾಸ್ಥಿತಿಯಲ್ಲಿವೆ.

ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಸೀಮೆಎಣ್ಣೆಯ ಬೆಲೆಗಳು ಕೂಡ ಬದಲಾಗದೆ ಉಳಿದಿವೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1,950– 2,200 ರೂ. ಇತ್ತು.

Related Articles

Back to top button