
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಹಾನಗಲ್ ಕ್ಷೇತ್ರದಲ್ಲಿ ನಿರೀಕ್ಷೆಯಷ್ಟು ಮತಗಳು ಬಂದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ.ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಸಾಧ್ಯವಾಗಿಲ್ಲ. ನಮ್ಮ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದರು. ಉಪಚುನಾವಣೆ ನಡೆದ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಗೆದ್ದು ಇನ್ನೊಂದು ಕ್ಷೇತ್ರದಲ್ಲಿ ಸೋತಿದ್ದೇವೆ. ಈ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಯತ್ನ ಮಾಡುತ್ತೇವೆ ಎಂದರು.
ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ 2-3 ವರ್ಷಗಳಿಂದ ಕೆಲಸ ಮಾಡಿದ್ದಾರೆ. ಹೀಗಾಗಿ ಕ್ಷೇತ್ರದ ಜನತೆ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಕೈಹಿಡಿದಿದ್ದಾರೆ. ಈ ಚುನಾವಣೆಯಲ್ಲಾದ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂಬರುವ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವುದಾಗಿ ತಿಳಿಸಿದರು.
ಸಿಂದಗಿಯಲ್ಲಿ ಹಣ ಬಲದಿಂದ ಬಿಜೆಪಿ ಗೆದ್ದಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜನ ಬೆಂಬಲವಿಲ್ಲದೇ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಹಣ ಬಲ, ತೋಳ್ಬಲದಿಂದ ಸಿಕ್ಕ ಗೆಲುವುದು ಎಂಬ ಆರೋಪ ಸುಳ್ಳು ಎಂದು ಹೇಳಿದರು.
ಹಾನಗಲ್ ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕೈ ಅಭ್ಯರ್ಥಿ ಶ್ರೀನಿವಾಸ್ ಮಾನೆಗೆ ಭರ್ಜರಿ ಗೆಲುವು
					
				
					
					
					
					
					
					
					

