Kannada NewsKarnataka NewsLatest
ಇಷ್ಟೊಂದು ದೊಡ್ಡ ಪ್ರಮಾಣದ ಅಭಿವೃದ್ಧಿಗೆ ಕಾರಣ ಮತ್ತು ಪ್ರೇರಣೆ ಜನರ ಸಹಕಾರ – ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸರಣಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಶಾಸಕಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ಷೇತ್ರದ ಜನರ ಸಹಕಾರವೇ ಕಾರಣ ಮತ್ತು ಜನರೇ ನನಗೆ ಪ್ರೇರಣೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಸೋಮವಾರ ಕ್ಷೇತ್ರದ ವಿವಿಧೆಡೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ವಿಧಾನಸಭೆಗೆ ಸ್ಪರ್ಧಿಸುವಾಗ ಕ್ಷೇತ್ರದ ಆಯ್ಕೆ ಅತ್ಯಂತ ಪ್ರಾಮುಖ್ಯ. ಕೆಲವರು ತಪ್ಪು ಆಯ್ಕೆಯಿಂದಾಗಿ ಆಯ್ಕೆಯಾಗುವುದೇ ಕಷ್ಟ. ಇನ್ನು ಕೆಲವರು ಆಯ್ಕೆಯಾದರೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನನ್ನ ಆಯ್ಕೆ ಅತ್ಯಂತ ಸಮರ್ಪಕವಾಗಿದೆ. ಪ್ರಕೃತಿಯ ಹಲವು ವಿಘ್ನಗಳ ಮಧ್ಯೆಯೂ, ಅನೇಕ ರಾಜಕೀಯ ಗೊಂದಲಗಳ ಮಧ್ಯೆಯೂ ನಿರಂತರ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಇಲ್ಲಿನ ಜನರೇ ಕಾರಣ. ಅವರ ಋಣವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ ಎಂದು ಹೆಬ್ಬಾಳಕರ್ ತಿಳಿಸಿದರು.
ಸಮುದಾಯಭವನದ ಸ್ಲ್ಯಾಬ್ ಪೂಜೆ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರ ಪ್ರೀತಿ, ಪ್ರೋತ್ಸಾಹಗಳ ಮೂಲಕ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗುತ್ತಿರುವುದನ್ನು ನೋಡಿದರೆ ಮನಸ್ಸಿಗೆ ಖುಷಿಯಾಗುವುದರ ಜೊತೆಗೆ ಈ ಕ್ಷೇತ್ರದ ಶಾಸಕಿಯಾಗಿದ್ದಕ್ಕೆ ಸಾರ್ಥಕ ಎನಿಸುತ್ತಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.

ಗ್ರಾಮ ಪಂಚಾಯತ್ ಕಾರ್ಯಾಲಯ ಉದ್ಘಾಟನೆ
ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಕಾರ್ಯಾಲಯ, ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.
ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಗ್ರಾಮದ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೈಸ್ಕೂಲ್ ಕೊಠಡಿ ಉದ್ಘಾಟನೆ

ಈ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಹೆಬ್ಬಾಳಕರ್, ಆರೋಗ್ಯ ಮತ್ತು ವಿದ್ಯಾಭ್ಯಾಸದ ಕುರಿತು ಚರ್ಚಿಸಿ, ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ನೀಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಹೈಸ್ಕೂಲ್ ಸಿಬ್ಬಂದಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ