
ಪ್ರಗತಿವಾಹಿನಿ ಸುದ್ದಿ: ಊಟ ಮಾಡಿ ರಸ್ತೆಯ ಪಕ್ಕ ವಿಶ್ರಾಂತಿ ಪಡೆಯುತ್ತಿದ್ದ ದಿನಗೂಲಿ ಕೆಲಸವರ ಮೇಲೆ ರೋಡ್ ರೋಲರ್ ಹರಿದು ಇಬ್ಬರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ.
ಮೃತರನ್ನು ಸಿದ್ದು (24) ಹಾಗೂ ಪ್ರೀತಮ್ (25) ಎಂದು ಗುರುತಿಸಲಾಗಿದೆ. ಮೋಟೆಬೆನ್ನೂರಿನಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ಕೆಲಸಕ್ಕಾಗಿ ಆಗಮಿಸಿದ ಇಬ್ಬರು ಶನಿವಾರ ಮಧ್ಯಾಹ್ನ ಊಟ ಮಾಡಿ ರೋಡ್ ರೋಲರ್ ಪಕ್ಕದಲ್ಲಿಯೇ ಮಲಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಘಟನೆಯ ಬಳಿಕ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಶವವಿಟ್ಟು ಕುಟುಂಬಸ್ಥರು, ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಲು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ