Belagavi NewsBelgaum NewsKannada NewsKarnataka News
*ಬಿರುಗಾಳಿ ಸಹಿತ ಮಳೆಗೆ ಹಾರಿಹೋದ ಮನೆಗಳ ಮೇಲ್ಛಾವಣಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಹೋಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ವಿವಿಧೆಡೆ ಭಾರಿ ಮಳೆ ಆಗಿದ್ದು, ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿಗಳು ಹಾರಿ ಹೋಗಿವೆ. ಅನೇಕ ಮನೆಗಳು ಕುಸಿದು ಬಿದಿದ್ದೆ. ನಿಪ್ಪಾಣಿ ತಾಲೂಕಿನ ವಿವಿಧೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರಳಿರುವ ವರದಿಯಾಗಿದೆ.
ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಸತತ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.




