ಪ್ರಗತಿವಾಹಿನಿ ಸುದ್ದಿ, ಗೋಕಾಕ – ಸತೀಶ ಶುಗರ‍್ಸ ಕಾರ್ಖಾನೆಗೆ ಕಳೆದ ೨೦೧೯-೨೦ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಪ್ರತಿ ಟನ್ ಕಬ್ಬಿಗೆ ಪ್ರಥಮ ಕಂತಾಗಿ ರೂ.೨೫೦೦ ರಂತೆ ದರವನ್ನು ಈಗಾಗಲೇ ಪಾವತಿಸಲಾಗಿದೆ.
ಎರಡನೇ ಕಂತನ್ನು ಘೋಷಿಸಲು ಆಡಳಿತ ಮಂಡಳಿಯಲ್ಲಿ ನಿರ್ಣಯ ಕೈಗೊಂಡಿದ್ದು, ಎರಡನೇ ಕಂತಾಗಿ ಪ್ರತಿ ಟನ್‌ಗೆ ರೂ.೨೨೫ ರಂತೆ ಘೋಷಿಸಲು ನಿರ್ಧರಿಸಲಾಗಿದೆ.
ಈ ಎರಡನೇ ಕಂತನ್ನು ಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. ೨೦೧೯-೨೦ರ ಹಂಗಾಮಿನ ಪ್ರತಿ ಟನ್ ಕಬ್ಬಿನ ದರ ಒಟ್ಟು ೨೭೨೫/- ರಂತೆ ಪಾವತಿಸಿದಂತಾಗುವುದು. ಕಬ್ಬು ಕಟಾವು ಮತ್ತು ಕಬ್ಬು ಸಾರಿಗೆ ದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ.
ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಸಹಾಯ ಮತ್ತು ಸಹಕಾರದಿಂದಾಗಿ ಸತತ ಯಶಸ್ಸನ್ನು ಸಾಧಿಸಲಾಗಿದ್ದು, ಪ್ರಸಕ್ತ ೨೦೨೦-೨೧ ರ ಹಂಗಾಮನ್ನು ರವಿವಾರ ಪ್ರಾರಂಭಿಸಲಾಗುವುದು. ಈಗಾಗಲೇ ಕಬ್ಬು ಕಟಾವು ಆದೇಶ ನೀಡಲಾಗಿದೆ. ಪ್ರಸಕ್ತ ಹಂಗಾಮಿನಲ್ಲಿಯೂ ರೈತರು ಪೂರೈಸುವ ಕಬ್ಬಿಗೆ ಯೋಗ್ಯ ದರ ನೀಡಲಾಗುವುದು ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಸಿದ್ಧಾರ್ಥ ವಾಡೆನ್ನವರ್ ತಿಳಿಸಿದ್ದಾರೆ.
ಪ್ರಸಕ್ತ ಹಂಗಾಮಿನಲ್ಲಿ ಉತ್ತಮ ಗುರಿ ಸಾಧಿಸುವ ನಿರೀಕ್ಷೆ ಹೊಂದಿದ್ದು, ಇದು ರೈತರ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯ. ಕಾರ್ಖಾನೆಗೆ ಕಬ್ಬು ಪೂರೈಸುವ ಸಮಸ್ತ ರೈತರು ಈ ಹಿಂದೆ ಹೆಚ್ಚು ಕಬ್ಬು ಪೂರೈಸಿ ಕಾರ್ಖಾನೆಯ ಪ್ರಗತಿಗೆ ಸಹಕರಿಸಿದಂತೆ ಪ್ರಸಕ್ತ ಹಂಗಾಮಿನಲ್ಲಿಯೂ ಒಳ್ಳೆಯ ಗುಣಮಟ್ಟ, ಒಳ್ಳೆಯ ರಿಕವರಿ ಇರುವ ಕಬ್ಬನ್ನು ಕಾರ್ಖಾನೆಗೆ ಪೂರೈಸಿ ಯಶಸ್ಸಿನಲ್ಲಿ ಭಾಗಿಯಾಗಬೇಕೆಂದು ಅವರು ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ