ಪ್ರಗತಿವಾಹಿನಿ ಸುದ್ದಿ, ಮುಂಬೈ – ಕೊರೋನಾ 2ನೇ ಅಲೆ ಮಹಾರಾಷ್ಟ್ರದಲ್ಲಿ ಗಂಭೀರವಾಗಿದ್ದು, ಈವರೆಗೆ 58 ಸಾವಿರ ಜನರು ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 60,212 ಜನರಿಗೆ ಹೊಸದಾಗಿ ಸೋಕು ಪತ್ತೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ.
ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಾಗಲಿದೆ. ಅನಗತ್ಯವಾಗಿ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಪೆಟ್ರೋಲ್ ಬಂಕ್, ಆಸ್ಪತ್ರೆಗಳಂತಹ ಅಗತ್ಯ ಸೇವೆಗಳ ಹೊರತುಪಡಿಸಿ ಹೊಟೆಲ್, ರೆಸ್ಟೋರೆಂಟ್ ಮೊದಲಾದವುಗಳನ್ನು ಮುಚ್ಚಲಾಗುತ್ತಿದೆ. ಆಹಾರ ಪಾರ್ಸೆಲ್ ಗೆ ಅವಕಾಶ ನೀಡಲಾಗುತ್ತಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಲಾಕ್ ಡೌನ್ ಮುಂದುವರಿಯಲಿದೆ.
ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿರುವ ಸಂದರ್ಭದಲ್ಲೇ ಕರ್ನಾಟಕದಲ್ಲೂ ಪರಿಸ್ಥಿತಿ ಗಂಭೀರವಾಗುತ್ತಿದೆ. ಹಾಗಾಗಿ ನೈಟ್ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ.
ಟಾಸ್ಕ್ ಫೋರ್ಸ್ ಸಮಿತಿ ಸಲಹೆ ಪಡೆದು ಇನ್ನಷ್ಟು ಗಂಭೀರ ಕ್ರಮ ತೆಗೆದುಕೊಳ್ಳುವ ಕುರಿತು ನಿರ್ಧರಿಸಲಾಗುತ್ತಿದೆ. ಇದರ ಜೊತೆಗೆ ಏ.18ರಂದು ಸರ್ವ ಪಕ್ಷ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಸರಕಾರ ನಿರ್ಧರಿಸಿದೆ.
ಶನಿವಾರದಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ