
ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ – ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತಷ್ಟು ಉಗ್ವಿಗ್ನವಾಗಿದೆ.
ಹರ್ಷ ಅಂತ್ಯ ಸಂಸ್ಕಾರ ಯಾತ್ರೆ ನಡೆಯುತ್ತಿದ್ದು ಈ ವೇಳೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಮೃತದೆಹವನ್ನು ತೆರೆದ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆ ಕೊಂಡೊಯ್ಯಲಾಗುತ್ತಿದೆ. ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದಾರೆ.
ಸಾವಿರಾರು ಜನರು 5 ಕಿಮೀ ದೂರದ ಈ ಮೆರವಣಿಗೆ ಸಾಗುತ್ತಿದ್ದು, ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಆದಾಗ್ಯೂ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ