
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಊರಲ್ಲಿರಲಿ ಬಿಡಲಿ ಅಭಿವೃದ್ದಿ ಕಾಮಗಾರಿಗಳು ಮಾತ್ರ ನಿರಂತರವಾಗಿ ನಡೆಯುತ್ತವೆ.
ಕ್ಷೇತ್ರದ ಸ್ಥಳೀಯ ಜನಪ್ರತಿನಿಧಿಗಳು, ಊರಿನ ಹಿರಿಯರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ, ಕಾಮಗಾರಿಗಳ ಮೇಲೆ ನಿಗಾ ವಹಿಸುವ ಕೆಲಸ ಮಾಡುತ್ತಾರೆ.
ಹೆಬ್ಬಾಳಕರ್ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ಪುತ್ರ ಮೃಣಾಲ್ ಹೆಬ್ಬಾಳಕರ್ ಮಾರ್ಗದರ್ಶನ ಮಾಡುತ್ತಾರೆ.

ಕ್ಷೇತ್ರದ ಗಣೇಶಪುರ ಗಂಗಾ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸುಮಾರು ಹತ್ತು ಲಕ್ಷ ರೂ. ಗಳ ವೆಚ್ಚದಲ್ಲಿ ರಸ್ತೆಯ ನಿರ್ಮಾಣದ ಕಾಮಗಾರಿಗೆ ಶಾಸಕಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಹಿರಿಯರು, ಪುತ್ರ ಮೃಣಾಲ ಹೆಬ್ಬಾಳಕರ ಹಾಗೂ ಪಕ್ಷದ ಕಾರ್ಯಕರ್ತರೆಲ್ಲ ಸೇರಿ ಅಧಿಕೃತವಾಗಿ ಚಾಲನೆಯನ್ನು ನೀಡಿದರು.


ಹಾಗೆಯೇ, ಕ್ಷೇತ್ರದ ಮಣ್ಣೂರ ಗ್ರಾಮದಲ್ಲಿ ಗ್ರಾಮೀಣ ನಗರ ಯೋಜನೆಯಡಿಯಲ್ಲಿ ಸುಮಾರು ಎಂಬತ್ತು ಲಕ್ಷ ರೂ. ಗಳ ವೆಚ್ಚದಲ್ಲಿ ರಸ್ತೆಯ ಕಾಮಗಾರಿಗಳು ನಡೆಯುತ್ತಿದ್ದು,
ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಹಿರಿಯರು, ಪುತ್ರ ಮೃಣಾಲ ಹೆಬ್ಬಾಳಕರ ಸೇರಿ ಪರಿಶೀಲನೆಯನ್ನು ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ