ಚಿಲುಮೆ ಪ್ರಕರಣ; ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಮತದಾರರ ವೈಯಕ್ತಿಕ ವಿವರ ಸೋರಿಕೆಯ ‘ಚಿಲುಮೆ’ ಪ್ರಕರಣ ಈಗ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರನ್ನೂ ಸುತ್ತಿಕೊಂಡಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಕಳೆದ ಮೇ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವೊಂದನ್ನು ಬರೆದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಖಾಸಗಿ ಕಂಪನಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತರು ಕರ್ತವ್ಯ ಲೋಪ ಎಸಗಿರುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.
ಈ ಪತ್ರದ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಚಿಲುಮೆ ಪ್ರಕರಣದಲ್ಲಿ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ