ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಾಜ್ಯ ಸರಕಾರದ ಬಳಿ ಹಣ ಇಲ್ಲ. ಪಾಪರ್ ಆಗಿ ಬಿಟ್ಟಿದೆ. ಸರಕಾರಿ ನೌಕರರ ಸಂಬಳ ಕೊಡಲು ಪರದಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು.
ಮಂಗಳವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ಛೀ, ಥೂ ಎಂದು ಉಗಿದಿದ್ದಾರೆ. ರಾಜ್ಯ ಸರಕಾರ ಲೋಕಸಭಾ ಚುನಾವಣೆಯಲ್ಲಿ ಜನರು ಮತಗಳನ್ನು ಕೊಡಲಿಲ್ಲ ಎಂದು ಜನರ ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಲು ಮುಂದಾಗಿದೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಗೂಂಡಾ ಕಾಯ್ದೆ ಹಾಕಿದರೆ ನಾವು ಸರಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರದಿಂದ 23 ಜನ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಸರಕಾರಕ್ಕೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲ. ಬರುವ ಅಧಿವೇಶನದಲ್ಲಿ ಈ ವಿಷಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಸರಕಾರದ ಕಿವಿ ಹಿಂಡುವ ಕೆಲಸ ಮಾಡಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ