Belagavi NewsBelgaum NewsKannada NewsKarnataka NewsLatestPolitics
*ಡಿ.ಕೆ.ಶಿವಕುಮಾರ ಇಂದು ಬೆಳಗಾವಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶನಿವಾರ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ.
ರಾತ್ರಿ 8 ಗಂಟೆಗೆ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು, 9.30ಕ್ಕೆ ಬೆಳಗಾವಿಗೆ ಆಗಮಿಸುವ ಅವರು, ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಶಾಸಕ ಆಸೀಫ್ ಸೇಠ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ರಾತ್ರಿ 10.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸಂಜೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ, ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿಯೇ ಬೆಂಗಳೂರಿಗೆ ತೆರಳುವರು.




