
ಪ್ರಗತಿವಾಹಿನಿ ಸುದ್ದಿ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ. ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ದೈನಂದಿನ ಸ್ವಚ್ಛತಾ ಕೆಲಸಗಳಿಗೆ ಸಮಸ್ಯೆಯಾಗದಂತೆ ವಾರಕ್ಕೆ ಒಂದು ದಿನ ರಜೆಯನ್ನು ನೀಡಲಾಗಿದೆ.
ಇನ್ನು ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿಲ್ಲ ಎಂದೂ ಆದೇಶದ ಮೂಲಕ ತಿಳಿಸಲಾಗಿದೆ.
ಪ್ರಮಖವಾಗಿ ಸ್ಥಳೀಯ ಜಾತ್ರೆ, ಪುಕೃತಿ ವಿಕೋಪ, ಸಭೆ ಸಮಾರಂಭ ಮುಂತಾದ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಬೇಡಿಕೆ ಇಡುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ