ಪ್ರಗತಿವಾಹಿನಿ ಸುದ್ದಿ, ನವದೆಹಲಿ – ರಾಷ್ಟ್ರದಲ್ಲಿ ಕೊರೋನಾ ಮಿತಿ ಮೀರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವಸಂಪುಟದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಹಲವು ಪ್ರಮುಖ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಭಾರತದಲ್ಲಿ ನಿತ್ಯ 3.70 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಡುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈಗ ತೆಗೆದುಕೊಂಡಿರುವ ಕ್ರಮಗಳು ಫಲ ನೀಡುತ್ತಿಲ್ಲ. ಹಾಗಾಗಿ ಶೇ.15ಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳು ಕಂಡು ಬರುತ್ತಿರುವ ರಾಷ್ಟ್ರದ 150 ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಣೆ ಮಾಡಲು ಆರೋಗ್ಯ ಇಲಾಖೆ ಶಿಫಾರಸ್ಸು ಮಾಡಿದೆ. ಇದರಲ್ಲಿ, ಬೆಂಗಳೂರು, ಕೊಡಗು, ತುಮಕೂರು, ಕೋಲಾರ, ರಾಯಚೂರು ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳೂ ಸೇರಿವೆ.
ಕೇವಲ ಜನತಾ ಕರ್ಫ್ಯೂನಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಕಠಿಣ ನಿರ್ಧಾರ ಅನಿವಾರ್ಯ ಎಂದು ಕೇಂದ್ರ ಸರಕಾರ ಹೇಳಿದೆ. ರಾಜ್ಯಗಳೇ ನಿರ್ಧಾರ ತೆಗೆದುಕೊಳ್ಳಬೇಕು, ಲಾಕ್ಡೌನ್ ಅಂತಿಮ ನಿರ್ಧಾರವಾಗಿರಲಿ ಎಂದು ಈ ಹಿಂದೆ ಪ್ರಧಾನಿ ಹೇಳಿದ್ದರು. ಆದರೆ ಈಗ ಲಾಕ್ಡೌನ್ ಅನಿವಾರ್ಯ ಎನ್ನುವ ಪರಿಸ್ಥಿತಿ ಉದ್ಭವವಾಗುತ್ತಿದೆ.
ಕೇಂದ್ರ ಸಚಿವ ಸಂಪುಟ ಸಭೆ ಯಾವ್ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಕಾದು ನೋಡಬೇಕಿದೆ.
ಜನತಾ ಕರ್ಫ್ಯೂ ಮತ್ತೂ ಒಂದು ವಾರ ವಿಸ್ತರಣೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ