Election NewsKannada NewsKarnataka NewsNational

ಭಾರಿ ಕುಸಿತ ಕಂಡ ಷೇರು ಮಾರುಕಟ್ಟೆ

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ 7ನೇ ಹಂತದ ಮತದಾನ ಮುಗಿಯುತ್ತಲೆ ಪ್ರಕಟವಾಗಿದ್ದ ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುತ್ತೆ ಎಂದು ಪ್ರಕಟವಾದಾಗ ಷೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿತು.‌ ಆದರೆ ಇನ್ನೇನು ಫಲಿತಾಂಶ ಪ್ರಕಟವಾಗಲಿದ್ದು, ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದೆ.‌

ಸೆನ್ಸೆಕ್ಸ್ 1600 ಪಾಯಿಂಟ್ಸ್  ಮತ್ತು ನಿಫ್ಟಿ 500 ಪಾಯಿಂಟ್ಸ್ ಕುಸಿತ ಕಂಡಿದೆ. ಇಂದು ಮಾರುಕಟ್ಟೆ ಓಪನ್ ಆಗುತ್ತಿದ್ದಂತೆ ಕುಸಿತ ಕಾಣಲು ಆರಂಭಿಸಿದೆ. ಈ ಬೆಳವಣಿಗೆ ಮಾರುಕಟ್ಟೆಯಲ್ಲಿ ತೀವ್ರ ಆತಂಕವನ್ನು ಸೃಷ್ಟಿಸುತ್ತಿದೆ. 

ಚುನಾವಣೋತ್ತರ ಸಮೀಕ್ಷಾ ವರದಿಗಳು ಬಾಂಬೆ ಷೇರುಪೇಟೆಗೆ ಭರ್ಜರಿ ಕಿಕ್‌ ನೀಡಿತ್ತು. ‘ಮೋದಿ ಸರ್ಕಾರ ಆರ್ಥಿಕತೆ ಉತ್ತೇಜನಕ್ಕೆ ಮತ್ತಷ್ಟು ಕ್ರಮ ಕೈಗೊಳ್ಳಲಿದೆ’ ಎಂಬ ನಿರೀಕ್ಷೆಯಲ್ಲಿ ಸೆನ್ಸೆಕ್ಸ್‌ ಸೋಮವಾರ 2507 ಅಂಕಗಳ ಭಾರೀ ಏರಿಕೆ ಕಂಡು ದಾಖಲೆಯ 76,468 ಅಂಕಗಳಲ್ಲಿ ಮುಕ್ತಾಯವಾಗಿತ್ತು. ಇದು 2019ರ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಂಡುಬಂದ ಸೆನ್ಸೆಕ್ಸ್‌ನ ಗರಿಷ್ಠ ದೈನಂದಿನ ಏರಿಕೆಯಾಗಿತ್ತು.

Home add -Advt

Related Articles

Back to top button