Belagavi NewsBelgaum NewsKannada NewsKarnataka NewsNationalPolitics

*ಹಿಂದೂ ಹುಲಿ ಇಲಿಯಾದ ಕಥೆ: ಕಾಂಗ್ರೆಸ್ ಲೇವಡಿ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದು, ಈ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಬಗ್ಗೆ ಸರಣಿ ಎಕ್ಸ್ ಮಾಡಿರುವ ಕಾಂಗ್ರೆಸ್, ಹಿಂದೂ ಹುಲಿ ಇಲಿಯಾದ ಕಥೆ ಇದಾಗಿದೆ. ಯತ್ನಾಳ್‌ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ ಎಂದು ಕುಹಕವಾಡಿ ಪೋಸ್ಟರ್ ಬಿಡುಗಡೆ ಮಾಡಿದೆ.

ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್!. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್!. ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ಎಂದು ವ್ಯಂಗ್ಯವಾಡಿದೆ.

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button