Karnataka News
*ಟ್ಯೂಷನ್ ಮುಗಿಸಿ ಬರುತ್ತಿದ್ದ ಮೂವರ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಗ್ರಾಮದ ಬಳಿ ಇಂದು ನಡೆದಿದೆ.
ಮೃತರನ್ನು ನಿತೀಶ್ (17) ನಿತಿನ್ ( 17) ವೈಭವ್ (16) ಎಂದು ಗುರುತಿಸಲಾಗಿದೆ. ಟ್ಯೂಷನ್ ಮುಗಿಸಿಕೊಂಡು ಮೂವರು ಒಂದೇ ಬೈಕ್‌ನಲ್ಲಿ ಮನೆಗೆ ಹಿಂದುರುಗುತ್ತಿದ್ದಾಗ, ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ.
ಮೃತರ ಪೈಕಿ ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ 10ನೇ ತರಗತಿ ಹಾಗೂ ನಿತಿನ್ ಮತ್ತು ನಿತೀಶ್ ಪಿಯುಸಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




