
ಪ್ರಗತಿವಾಹಿನಿ ಸುದ್ದಿ: ಮೂರು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯಾತ್ರಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮರನಾಥ ಯಾತ್ರೆಗೆಂದು ಬೇಸ್ ಕ್ಯಾಂಪ್ ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮುರು ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹೊರತುಪಡಿಸಿ ಉಳಿದ ಯಾತ್ರಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಯಾತ್ರೆ ಮುಂದುವರೆದಿದೆ.