
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ೮ ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಕಾಶಿನಾಥ ಶಿಂಧಿಗಾರ (೨೮) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ ಯೋಧರಾಗಿದ್ದು, ೮ ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು ಪಂಜಾಬ್‌ನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಯೋಧನ ಸಾವಿನಿಂದ ಸ್ವಗ್ರಾಮ ಕನಸಗೇರಿಯಲ್ಲಿ ಸ್ಮಶಾನ ಮೌನ ಆವರಿಸಿದ್ದು, ದುಃಖ ಮಡುಗಟ್ಟಿದೆ. ಯೋಧನ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮ ಕನಸಗೇರಿಗೆ ಆಗಮಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ