ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾಳೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದ ಸಂಸದ ಪ್ರಜ್ವಲ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಹಲವು ವಿಡಿಯೋಗಳು ವೈರಲ್ ಆದ ನಾಲೈದು ದಿನಗಳ ಬಳಿಕ ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಜ್ವಲ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ಕೊಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋಗಳ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಪ್ರಕರಣದ ಕುರಿತ ತನಿಖೆಗೆ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ