Belagavi NewsBelgaum NewsEducationKannada NewsKarnataka NewsLatest

2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –

ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಪ್ರಾಯವಿಲ್ಲ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಅವರು ತಮ್ಮ ಬೆಂಬಲಿಗರೊಂದಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೫ ಜನ ಕಾಂಗ್ರೆಸ್ ಅಭ್ಯರ್ಥಿಗಳಿದ್ದರು ಸಹ ನಮಗೆ ಯಾವುದೇ ಸಮಸ್ಯೆ ಇಲ್ಲ. ವಿಧಾನಸಭೆ ಚುನಾವಣೆ ಬೇರೆ, ಲೋಕಸಭಾ ಚುನಾವಣೆ ಬೇರೆ ಎಂದರು.

ರಮೇಶ ಕತ್ತಿ ಸಹ ಪ್ರಚಾರಕ್ಕೆ ಬರುತ್ತಾರೆ ಎಂದರು. ಕೊವಿಡ್ ಹಾಗೂ ಪ್ರವಾಹ ಸಂಧರ್ಭದಲ್ಲಿ ನಾನು ನಮ್ಮ ಸಂಸ್ಥೆಯ ಸದಸ್ಯರು, ನಮ್ಮ ವ್ಯಾಪ್ತಿಯ ಶಾಸಕರು ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಬಾರಿ ಜನರ ಬೆಂಬಲ ನೋಡಿದರೆ ೨ ಲಕ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗೆಲವು ಸಾಧಿಸುತ್ತೇವೆ ಎಂದರು.

ಬಳಿಕ ಲೋಕಸಭಾ ಚುನಾವಣೆ ಪ್ರಭಾರಿ ಪಿ.ಎಚ್.ಪೂಜಾರ ಮಾತನಾಡಿ, ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಪರ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವನಾಯಕರಾಗಿ ಹೋರಹೊಮ್ಮಿದ್ದಾರೆ. ಮತ್ತೋಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ನಿಶ್ಚಿತ ಎಂದರು.

ಅಣ್ಣಾಸಾಹೇಬ ಜೊಲ್ಲೆಯವರು ಮಾಡಿದ ಅಭಿವೃದ್ಧಿ ಹಾಗೂ ತಮ್ಮ ಸಂಸ್ಥೆಯ ಮೂಲಕ ಮಾಡಿರುವ ಉದ್ಯೋಗ ಸೃಷ್ಟಿ ಇವೆಲ್ಲ ಕಾರ್ಯಗಳನ್ನು ಜನರು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಣ್ಣಾಸಾಹೇಬ ಜೊಲ್ಲೆ ಗೆಲವು ನಿಶ್ಚಿತ ಎಂದರು.

ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಕಲ್ಲಪ್ಪಣಾ ಮಗೆನ್ನವರ ಮಾತನಾಡಿ, ಈ ಸಲ ಜೆಡಿಎಸ್ ಹಾಗೂ ಬಿಜೆಪಿ ಒಟ್ಟಾರೆಯಾಗಿ ಚುನಾವಣೆ ಎದುರಿಸುತ್ತಿರುವುದರಿಂದ ನಮ್ಮೆಲ್ಲಾ ಕಾರ್ಯಕರ್ತರು ಬಿಜೆಪಿಗೆ ಬೆಂಬಲಿಸುವ ಮೂಲಕ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಬರುವಲ್ಲಿ ಕೈಜೋಡಿಸುತ್ತೇವೆ ಎಂದರು.

ನಿಪ್ಪಾಣಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ,ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ ಕುಮಟಳ್ಳಿ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಡಾ.ರಾಜೇಶ್ ನೇರ್ಲಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವಥಪುರ, ಶಿವಾನಂದ ನವಲಿಹಾಳ, ಅಮೃತ ಕುಲಕರ್ಣಿ, ಅಪ್ಪಾಸಾಹೇಬ ಚೌಗಲಾ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button