Belagavi NewsBelgaum NewsKannada NewsKarnataka NewsNational

*ಮುಂದಿನ ಎರಡು ದಿನ ಭರ್ಜರಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ 15 ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲವೂ ಭಾರಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕ ಮಳೆಯ ಮುನ್ಸೂಚನೆ ನೀಡಿದೆ.

Home add -Advt

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ಇದೆ. ಅಲ್ಲದೆ, ದಾವಣಗೆರೆ ಜಿಲ್ಲೆಯಲ್ಲೂ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬಾಗಲಕೋಟೆ ಮತ್ತು ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

ಇಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button