
ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ.
ಹೆಂಡತಿಯ ನಡುವೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪತ್ನಿ ಭಾರತಿ ಸುರೇಶ್ ಎಂಬಾಕೆ ಗಂಡನನ್ನು ಹೊಡೆದು ಹತ್ಯೆ ಮಾಡಿದ್ದಾಳೆ. ಬಸವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಸುರೇಶ್(53) ಮೃತಪಟ್ಟ ಪತಿಯಾಗಿದ್ದು, ಆತನ ಪತ್ನಿ ಭಾರತಿ ಎಂಬಾಕೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಂದಿದ್ದಾಳೆ. ಕಳೆದ ರಾತ್ರಿ ಮನೆಯಲ್ಲಿ ಗಂಡ ಹೆಂಡತಿ ನಡುವೆ ವಿಪರೀತ ಜಗಳವಾಗಿದ್ದು, ಮರಗೆಲಸ ಮಾಡಿಕೊಂಡು ಮನೆಗೆ ಬಂದ ಪತಿ ಸುರೇಶ್ ಜೊತೆ ಭಾರತಿ ಹೊಡೆದಾಟಕ್ಕೆ ಇಳಿದಿದ್ದಾಳೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿ ಇದ್ದ ಮರದ ದೊಣ್ಣೆ ತೆಗೆದುಕೊಂಡು ಬಲವಾಗಿ ತಲೆಗೆ ಬಾರಿಸಿದ್ದಾಳೆ. ಈ ವೇಳೆ ಕುಸಿದು ಬಿದ್ದ ಸುರೇಶ ಹೆಡ್ ಇಂಜ್ಯುರಿ ಉಂಟಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ. ಕೊಲೆ ಪ್ರಕರಣ ದಾಖಲು ಮಾಡಿ ಕೊಂಡಿರುವ ಬಸವನಹಳ್ಳಿ ಪೊಲೀಸರು ಆರೋಪಿ ಭಾರತಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ