Belagavi NewsBelgaum NewsKannada NewsKarnataka NewsLatest

*ಭೀಕರ ಅಪಘಾತದಲ್ಲಿ ASI ದುರ್ಮರಣ; PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯ ಎಎಸ್ಐ ಮೃತಪಟ್ಟಿದ್ದು, ಇದೇ ಪ್ರಕರಣದಲ್ಲಿ ಈಗ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರ್ತವ್ಯದಲ್ಲಿದ್ದ ಎ ಎಸ್ ಐ ವಿಜಯಕಾಂತ ಮಿಕಲಿ (51) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಬೆಳಗಾವಿ ಎಸ್ ಪಿ ಡಾ.ಭೀಮಾಶಂಕರ್ ಗುಳೇದ್ ಎಲ್ಲಾ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಆದೇಶಿಸಿದ್ದರೂ ವಿಜಯಕಾಂತ ಮಿಕಲಿ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದರು. ಇದೇ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Home add -Advt

ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಆದೇಶ ನೀಡಿದ್ದರೂ ಎಎಸ್ಐ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ನಿರ್ದೇಶನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯವಹಿಸಿದ ಕಾರಣಕ್ಕೆ ದೊಡವಾಡ ಠಾಣೆ ಪಿಎಸ್ ಐ ನಂದೀಶ್ ಅವರನ್ನು ಅಮಾನತು ಮಾಡಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.

Related Articles

Back to top button