Belagavi NewsBelgaum NewsEducationKannada NewsKarnataka NewsNationalPolitics

*ಗೃಹಲಕ್ಷ್ಮೀ ಹಣ ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ ಗ್ರಾಮದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಮಕ್ಕಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಹಣ ನೀಡಿದೆ ಎಂದು ಗಂಗಮ್ಮ ಹೇಳಿದ್ದಾರೆ. ಗಂಗಮ್ಮಳ ಹೃದಯ ವೈಶಾಲ್ಯತೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button