
ಪ್ರಗತಿವಾಹಿನಿ ಸುದ್ದಿ: 17 ಕಳ್ಳತನ ಕೇಸ್ ಗಳಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ ನಡೆಸಲಾಗಿದೆ.
ಹುಬ್ಬಳ್ಳಿ ತಾಲೂಕಿನ ತಾರಿಹಾಳ ಬಳಿ ಆರೋಪಿ ವಿನೋದ್ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಕಳ್ಳತನ ಪ್ರಕರಣದಲ್ಲಿ ನಿನ್ನೆ ವಿನೋದ್ನನ್ನು ಪೊಲೀಸರು ಬಂಧಿಸಿದ್ದರು. ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದೊಯ್ದಿದ್ದ ವಿನೋದ್, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದ. ಆತ್ಮರಕ್ಷಣೆಗಾಗಿ ವಿನೋದ್ ಕಾಲಿಗೆ ಪಿಐ ಜಯಶ್ರೀ ಫೈರಿಂಗ್ ಮಾಡಿದ್ದಾರೆ.




