Election NewsKannada NewsKarnataka NewsPolitics

*ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್: ನಾಳೆ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಇದೇ ಏಪ್ರಿಲ್ 9 ರಂದು ನಡೆಯಲಿದೆ.‌ ಎರಡು ವಿಧಾನಸಭಾ ಕ್ಷೇತ್ರಗಳಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗುತ್ತಿದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. 

ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು,ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾಳೆ ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. 

Related Articles

Back to top button