*BREAKING: ಚಿತ್ರಮಂದಿರದಲ್ಲಿ ಬೆಂಕಿ ಅವಘಡ: ಪಿಠೋಪಕರಣಗಳು ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ: ಗದಗ ನಗರದಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಡೀ ಚಿತ್ರಮಂದಿರ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಚಿತ್ರ ಮಂದಿರದಲ್ಲಿದ್ದ ಕುರ್ಚಿ, ಪಿಠೋಪಕರಣಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. Home add -Advt *ಶೀತಗಾಳಿ: ಮೈಕೊರೆವ ಚಳಿಗೆ ರಾಜ್ಯದ ಜನತೆ ತತ್ತರ: 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*