ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ವಿಧಿಸಲಾಗಿದ್ದ ಹಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ನಿಯಮ ಸಡಿಲಿಕೆ ಕುರಿತ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ನಾಳೆಯಿಂದಲೇ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತದೆ. ಥಿಯೇಟರ್ ಗಳಲ್ಲಿ ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದರು.
ಥಿಯೇಟರ್ ಗಳಲ್ಲಿ ತಿಂಡಿ, ತಿನಿಸುಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇನ್ನು ಜಿಮ್, ಯೋಗಾ ಸೆಮ್ಟರ್, ಈಜುಕೊಳಗಳಿಗೂ ಶೇ.100ರಷ್ಟು ಅನುಮತಿ ನೀಡಲಾಗಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮ ಪಾಲನೆಗೆ ಸೂಚಿಸಲಾಗಿದ್ದು, 2 ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದೆ.
ಮದುವೆ, ಸಮಾರಂಭಗಳಿಗೆ ಹಿಂದಿನ ನಿಯಮವೇ ಯಥಾ ಸ್ಥಿತಿ ಮುಂದುವರೆಯಲಿದೆ ಎಂದು ತಿಳಿಸಿದರು.
ಮತ್ತೆ ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ