ಯೆಸ್ ಬ್ಯಾಂಕ್ ಸಂಸ್ಥಾಪಕ ಇಡಿ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಮುಂಬೈನಲ್ಲಿ ಕಪೂರನ್ನು ಬಂಧಿಸಿದ್ದು ಹಣ ಅವ್ಯವಹಾರ ಪ್ರಕರಣ ಸಂಬಂಧ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ.

ಕಾಳಧನ ಸಕ್ರಮ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕಪೂರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ದೇಶ ಬಿಟ್ಟು ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

Related Articles

Back to top button