
ಪ್ರಗತಿವಾಹಿನಿ ಸುದ್ದಿ: ಮನೆಯೊಂದರಲ್ಲಿ ಇಬ್ಬರು ಕಳ್ಳರು ಕಳ್ಳತನ ಮಾಡಿ ಓಡಿ ಹೋಗುವಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಓಡಿಹೋಗಲು ಯತ್ನಿಸಿದಾಗ ಪುಲೀಸರು ಕಾಲಿಗೆ ಗುಂಡು ಹಾರಿಸಿರುವ ಘಟನೆ ಧಾರವಾಡದ ಗಿರಿನಗರದ ಬಡಾವಣೆಯಲ್ಲಿ ನಡೆದಿದೆ.
ಮುಜಾಮಿಲ್ ಹಾಗೂ ವಿಜಯ್ ಎಂಬ ಕಳ್ಳರು ಕಳ್ಳತನ ಮಾಡಿ ಓಡಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಕಳ್ಳರು ಪಿಎಸ್‌ಐ ಮಲ್ಲಿಕಾರ್ಜುನ ಹೊಸೂರ ಹಾಗೂ ಪೊಲೀಸ್ ಪೇದೆ ಮಹ್ಮದ್ ಇಸಾಕ್ ಅವರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಇಬ್ಬರೂ ಕಳ್ಳರು ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ಮಲ್ಲಿಕಾರ್ಜುನ ಅವರು ಕಳ್ಳರ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಕಳ್ಳರು ನಡೆಸಿದ ಹಲ್ಲೆ ವೇಳೆ ಪಿಎಸ್‌ಐ ಮಲ್ಲಿಕಾರ್ಜುನ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.