ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪುರಸಭೆಗಳ ಅಧಿನಿಯಮದ ಪ್ರಕಾರ ಅರ್ಹತೆ ಹೊಂದಿರುವ ಮತ್ತು 15 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯಿರುವ, ಜಿಲ್ಲಾಧಿಕಾರಿಗಳಿಂದ ಬಂದಿರುವ ಪ್ರಸ್ತಾವನೆಗಳೆಲ್ಲ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲು ಪರಿಗಣಿಸಲಾಗಿದೆ ಎಂದು ಪೌರಾಡಳಿತ ಸಚಿವರು ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಹಾಂತೇಶ್ ಮ ಕವಟಗಿಮಠ ಅವರ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. 2015ರ ಜನಸಂಖ್ಯೆಯ ಆಧಾರದ ಮೇಲೆ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಸರ್ಕಾರದ ವಿಚಾರವನ್ನು ಪ್ರಸ್ತಾಪಿಸಿ, ಬೆಳಗಾವಿ ಜಿಲ್ಲೆಯಲ್ಲಿ ಅನೇಕ ದೊಡ್ಡ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪೂರ ತಾಲ್ಲೂಕಿನ ಇಟಗಿ (15000), ಹುಕ್ಕೇರಿ ತಾಲ್ಲೂಕಿನ ಹತ್ತರಗಿ, ಚಿಕ್ಕೋಡಿ ತಾಲ್ಲೂಕಿನ ಕೆರೂರು 16,189), ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮೀಣ, ಅಥಣಿ ತಾಲ್ಲೂಕಿನ ಸಂಕೋನಟ್ಟಿ, (ಅಥಣಿ ಗ್ರಾಮೀಣ), ಕಾಗವಾಡ ತಾಲ್ಲೂಕಿನ ಮಂಗಸೂಳಿ (17,500) ಮತ್ತು ಮೋಳೆ (16,850), ಬೆಳಗಾವಿ ತಾಲ್ಲೂಕಿನ ಸಾಂಬ್ರಾ (15,575) ಮತ್ತು ಹಿರೇಬಾಗೇವಾಡಿ (19,000), ಕಂಗ್ರಾಳಿ (15,700), ಕಾಕತಿ (18,000) ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಗ್ರಾಮ ಪಂಚಾಯತಿಗಳಾಗಿವೆ.
ಸುಮಾರು 35 ರಿಂದ 40 ಪಂಚಾಯತ್ ಸದಸ್ಯರನ್ನು ಹೊಂದಿರುವ ಈ ದೊಡ್ಡ ಗ್ರಾಮ ಪಂಚಾಯತಿಗಳು ಗ್ರಾಮ ಪಂಚಾಯತಿಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ, 15 ಸಾವಿರಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಅವುಗಳನ್ನು ಪಟ್ಟಣ ಪಂಚಾಯತಿ ಅಥವಾ ಪುರಸಭೆಯಗಳನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ